ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸೇರಿದ ಕಾಟೇಜ್ ಗೆ ಬೆಂಕಿ…

53
firstsuddi

ಕೊಪ್ಪಳ: ಜಿಲ್ಲೆಯ ಗಂಗಾವತಿ ಶಾಸಕ ಹಾಗೂ ಕೆಆರ್​ಪಿಪಿ ಅಧ್ಯಕ್ಷ ಜನಾರ್ದನ ರೆಡ್ಡಿ ಅವರ ಕಾಟೇಜ್‌ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಗಂಗಾವತಿ ತಾಲೂಕಿನ ಪಂಪಾಸರೋವರ ಬಳಿ ಇರುವ ಕಾಟೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದು ಕಿಡಿಗೇಡಿಗಳ ಕೃತ್ಯ ಇರಬಹುದು ಎಂದು ರೆಡ್ಡಿ ಬೆಂಬಲಿಗರು ಶಂಕೆ ವ್ಯಕ್ತಪಡಿಸಿದ್ದಾರೆ.

ಖಾಲಿ ಕಾಟೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಆಸ್ತಿ ಹಾನಿಯ ಹೊರತಾಗಿ ಯಾವುದೇ ಜೀವ ಹಾನಿ ಅಥವಾ ಗಾಯಗಳಾಗಿಲ್ಲ. ಮಾಹಿತಿ ತಿಳಿಯುತ್ತಿದಂತೆಯೇ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.