ಗಂಡು ಮಗುವಿಗೆ ಜನ್ಮ ನೀಡಿದ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ.

84
firstsuddi

ಬೆಂಗಳೂರು : ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪಟ್ಟಸ್ವಾಮಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಕುರಿತು ಸ್ವತಃ ನಯನಾ ಅವರೇ ಇನ್ಸ್ಟಾ ಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಟ್ ಇಸ್ ಎ ಬಾಯ್ ಎಂದು ಬರೆದುಕೊಂಡು ಮಗುವಿನ ಕೈ ಫೋಟೋ ಪೋಸ್ಟ್ ಮಾಡಿದ್ದಾರೆ.

ನಯನಾ ಪುಟ್ಟಸ್ವಾಮಿ ಬಿಗ್ ಬಾಸ್ 6 ಹಾಗೂ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 1ರ ವಿನ್ನರ್ ಆಗಿದ್ದರು. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಸಿರಿಯಲ್ ಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಯನಾ ಅವರ ಪತಿ ಚರಣ್ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವುದಿರಿಂದ ಅಲ್ಲಿಯೇ ನೆಲೆಸಿದ್ದಾರೆ.