ಗಡಿಯಲ್ಲಿ ಮತ್ತೆ ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ-ಓರ್ವ ಯೋಧ ಹುತಾತ್ಮ…

185
firstsuddi

ಶ್ರೀನಗರ : ಪಾಕ್ ಸೈನಿಕರು ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕ್ ಸೇನೆಯ ಅಪ್ರಚೋದಿತ ಗುಂಡಿನ ದಾಳಿಯಿಂದ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಪೂಂಚ್ ಜಿಲ್ಲೆಯ ಮನಕೋಟ್, ನೌಶೇರಾ ಸೆಕ್ಟರ್ ಹಾಗೂ ಕೃಷ್ಣ ಘಾಟಿಯಲ್ಲಿ ಪಾಕ್ ಸೈನಿಕರು ಇಂದು ಮುಂಜಾನೆ 3:30ರ ಸುಮಾರಿಗೆ ಕದನ ವಿರಾಮ ಉಲ್ಲಂಘಿಸಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ.