ಶ್ರೀನಗರ : ಗಡಿ ನಿಯಂತ್ರಣ ರೇಖೆ ಬಳಿ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಪಾಕಿಸ್ತಾನಿ ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ರಜೌರಿ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಉಗ್ರರು ಒಳ ನುಸುಳಲು ಸಂಚನ್ನು ರೂಪಿಸಿದ್ದರು. ಈ ಕುರಿತು ಮಾಹಿತಿ ತಿಳಿದ ಯೋಧರು ಕಾರ್ಯಾಚರಣೆಗೆ ಇಳಿದಿದ್ದು, ಬಳಿಕ ಉಗ್ರರು ಭಾರಿ ಪ್ರಮಾಣದ ಸ್ಪೋಟಕಗಳನ್ನು ಸ್ಪೋಟಿಸಿ ಗಡಿ ನಿಯಂತ್ರಣ ರೇಖೆ ಬಳಿ ಒಳ ನುಸುಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಮೃತಪಟ್ಟಿದ್ದು, ಮತ್ತೋರ್ವ ಉಗ್ರನಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳಿಂದ ತಿಳಿದು ಬಂದಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಸೇನೆ ಕಾರ್ಯಾಚರಣೆ ಮುಂದುವರೆಸಿದೆ.










