ಗಡಿ ವಿವಾದ – ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದು…

32
firstsuddi

ಬೆಳಗಾವಿ : ಬೆಳಗಾವಿಗೆ ಭೇಟಿ ನೀಡಿಯೇ ತೀರುತ್ತೇವೆ, ನಮ್ಮನ್ನು ಯಾರೂ ತಡೆಯಲಾಗದು ಎಂದು ಹೇಳಿದ್ದ ಮಹಾರಾಷ್ಟ್ರ ಸಚಿವರು, ಇದೀಗ ಬೆಳಗಾವಿ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಬೆಳಗಾವಿ ಗಡಿ ಭಾಗದಲ್ಲಿ ಗ್ರಾಮಸ್ಥರನ್ನು ಭೇಟಿಯಾಗಲು ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಇಂದು ಭೇಟಿ ನೀಡಬೇಕಿತ್ತು. ಆದರೆ ಈ ಸಂದರ್ಭದಲ್ಲಿ ಬೆಳಗಾವಿ ಭೇಟಿ ಸೂಕ್ತವಲ್ಲ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಗಳಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ಸಿಎಂ ಮಾಹಿತಿ ಮೇರೆಗೆ ಇಬ್ಬರು ಗಡಿ ಉಸ್ತುವಾರಿ ಸಚಿವರು ಪ್ರವಾಸವನ್ನು ರದ್ದು ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಶಂಭುರಾಜ್ ದೇಸಾಯಿ ಅವರು, ಗಡಿ ಭಾಗದ ಭೇಟಿಯಿಂದ ಕಾನೂನು ಸುವ್ಯವಸ್ಥೆ ಹದಗೆಡಬಹುದು ಎಂದು ಕರ್ನಾಟಕ ಸರ್ಕಾರ ಹೇಳಿದೆ. ಈ ಹಿನ್ನೆಲೆ ಭೇಟಿ ದಿನಾಂಕವನ್ನು ಮುಂದೂಡಿದೆ, ಬೆಳಗಾವಿ ಭೇಟಿಯನ್ನು ರದ್ದುಗೊಳಿಸಿಲ್ಲ ಶೀಘ್ರದಲ್ಲಿ ಹೊಸ ದಿನಾಂಕ ಪ್ರಕಟಿಸುತ್ತೇವೆ ಎಂದಿದ್ದಾರೆ.