ಗಣರಾಜ್ಯೋತ್ಸವ ಸಂಭ್ರಮ – ರಾಜಪಥ್​​ನಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್.

64
firstsuddi

ನವದೆಹಲಿ : 73ನೇ ಗಣರಾಜ್ಯೋತ್ಸವದ ನಿಮಿತ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ ಕೋವಿಂದ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಇತರ ಗಣ್ಯರು ರಾಜಪಥಕ್ಕೆ ತಲುಪಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಧ್ವಜಾರೋಹಣ ಮಾಡಿದರು.

ಕೋವಿಡ್ ಸಂಕಷ್ಟದ ನಡುವೆ ಈ ಬಾರಿಯ ಗಣರಾಜ್ಯೋತ್ಸವ ರಾಜಫಥದಲ್ಲಿ ಅದ್ದೂರಿಯಾಗಿ ನಡೆಯುತ್ತಿದೆ. ರಾಜಪಥ್ ಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು. ರಾಮನಾಥ್ ಕೋವಿಂದ್ ಅವರ ಜತೆ ಪತ್ನಿ ಸವಿತಾ ಕೋವಿಂದ್ ಕೂಡ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ರಾಜಪಥ್ ನಲ್ಲಿ ಧ್ವಜಾರೋಹಣದ ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಮ್ಮು-ಕಾಶ್ಮೀರ ಪೊಲೀಸ್ ಎಎಸ್ಐ ಬಾಬು ರಾಮ್ ಅವರಿಗೆ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಬಾಬು ರಾಮ್ ಅವರ ಪರವಾಗಿ ಅವರ ಪತ್ನಿ ರೀನಾ ರಾಣಿ ಮತ್ತು ಪುತ್ರ ಮಣಿಕ್ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಈ ಬಾರಿ ಕೋವಿಡ್ ಹಾಗೂ ನವದೆಹಲಿಯಲ್ಲಿ ಆದ ಹವಾಮಾನ ವೈಪರೀತ್ಯದಿಂದಾಗಿ ಪರೇಡ್ 10;30ಕ್ಕೆ ಆರಂಭವಾಯಿತು. ಭಾರತದ ಮಿಲಿಟರಿ ಶಕ್ತಿ ಮತ್ತು ಸಾಂಸ್ಕೃತಿಕ ವೈವಿದ್ಯತೆಗಳ ಪ್ರದರ್ಶನ ನಡೆಯಲಿದೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷ ಆದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಆಜಾದಿ ಕಾ ಅಮೃತಮಹೋತ್ಸವದ ಭಾಗವಾಗಿ ಈ ಬಾರಿ ಗಣರಾಜ್ಯೋತ್ಸವದಲ್ಲಿ ಹಲವು ಕಾರ್ಯಕ್ರಮಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.