ಗಣಿತ ನೋಟ್​ಬುಕ್ ತಂದಿಲ್ಲ ಎಂದು ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಹಲ್ಲೆ.

89
firstsuddi

ಬೆಂಗಳೂರು : ಶಿಕ್ಷಕರೊಬ್ಬರು 6ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

ನಗರದ ಮೂಡಲಪಾಳ್ಯದ ಬ್ಲೂ ಬೆಲ್ ಪಬ್ಲಿಕ್ ಶಾಲೆಯಲ್ಲಿ ತನ್ಮಯ್ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಈತ ಶಾಲೆಗೆ ಗಣಿತ ನೋಟ್ ಬುಕ್ ತಂದಿಲ್ಲ ಎಂದು ಗಣಿತ ಶಿಕ್ಷಕ ಮಾದೇಶ್ ತನ್ಮಯ್ ಕಪಾಳಕ್ಕೆ ಹೊಡೆದಿದ್ದಾರೆ. ಪರಿಣಾಮ ತನ್ಮಯ್ ಕೆನ್ನೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ.

ಸದ್ಯ ವಿದ್ಯಾರ್ಥಿಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಷ್ಟೆಲ್ಲ ಆದರೂ ಪ್ರತಿಷ್ಠಿತ ಖಾಸಗಿ ಶಾಲೆಯ ಆಡಳಿತ ಮಂಡಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ ಶಿಕ್ಷಕರಿಗೆ ಕೊರೊನಾ ತಗುಲಿದೆ. ಹೀಗಾಗಿ ನಾವೂ ಏನು ಮಾಡುವಂತಿಲ್ಲ ಎಂದು ಪ್ರಾಂಶುಪಾಲರು ಉಡಾಫೆ ಉತ್ತರ ನೀಡಿದ್ದಾರೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.