ಗರ್ಭಿಣಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ-ಜಗತ್ತು ನೋಡುವ ಮೊದಲೇ ಗರ್ಭದಲ್ಲೇ ಮಗು ಸಾವು…

206
firstsuddi

ರಾಯಚೂರು : ಕೊರೊನಾ ಸೋಂಕಿತ ಗರ್ಭಿಣಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದೇ ಮಗು ಹೊಟ್ಟೆಯಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ದೇವದುರ್ಗ ಮೂಲದ ಗರ್ಭಿಣಿಯನ್ನು ಕಳೆದ ಎರಡು ದಿನಗಳ ಹಿಂದೆ ನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡದ ಕಾರಣ ಸೋಂಕಿತರೆಲ್ಲರೂ ಊಟ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಗೆ ಮಣಿದು ವೈದ್ಯರು ಸೋಂಕಿತ ಗರ್ಭಿಣಿಯನ್ನು ರಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಹೀಗಾಗಿ ಗರ್ಭಿಣಿಗೆ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಇನ್ನು ಜಗತ್ತನ್ನೇ ನೋಡದ ಕಂದಮ್ಮ ಹೊಟ್ಟೆಯಲ್ಲೇ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷತನದಿಂದ ಸಿಟ್ಟಿಗೆದ್ದ ಸೋಂಕಿತರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.