ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸಿರುವ ಚೇತನ್, ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು ಎಂದಿದ್ದಾರೆ. ಸುಖವಿಂದರ್ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಲು ಯೋಜಿಸಿರುವುದನ್ನು ಚೇತನ್ ಬೆಂಬಲಿಸಿದ್ದಾರೆ.
ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೇತನ್, ‘ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ. ಉತ್ತರಾಖಂಡ, ಗುಜರಾತ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಕರ್ನಾಟಕವೂ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು’ ಎಂದಿದ್ದಾರೆ.
ಈ ಹಿಂದೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟ ರಾಕೇಶ್ ಅಡಿಗ ಕೂಡ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಹೇಳಿಕೆ ನೀಡಿದ್ದರು. ಅದು ಭಾರೀ ಕೋಲಾಹಲವನ್ನೇ ಎಬ್ಬಿಸಿತ್ತು.










