ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು…

141
firstsuddi

ಕುಂದಾಪುರ : ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಕುಂದಾಪುರ ಕೋಡಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರ ಕೋಡಿ ಮುಲ್ಲಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಆತನಿಗೆ ಗಾಂಜಾ ನೀಡಿದ ಮಸೂದ್ ಯಾನೆ ಚಿನ್ನು ಪರಾರಿಯಾಗಿದ್ದಾನೆ. ಬಂಧಿತನಿಂದ 33 ಸಾವಿರ ಮೌಲ್ಯದ 1ಕೆ.ಜಿ. 100 ಗ್ರಾಂ ಹಾಗೂ 10 ಸಾವಿರ ರೂ ಮೌಲ್ಯದ ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್, ಮಸೂದ್ ಯಾನೆ ಚಿನ್ನು ಎಂಬುವವನಿಂದ ಗಾಂಜಾ ತೆಗೆದುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ. ಈ ವೇಳೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಕುಂದಾಪುರ ಕೋಡಿ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್ ನಿಂದ 33 ಸಾವಿರ ಮೌಲ್ಯದ ಗಾಂಜಾ ಹಾಗೂ 10 ಸಾವಿರ ಮೌಲ್ಯದ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.