ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಪೊಲೀಸರ ವಶಕ್ಕೆ…

34
firstsuddi

ನೆಲಮಂಗಲ : ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಕ್ಷಿಣ ಕಾಶಿ ಶ್ರೀಕ್ಷೇತ್ರ ಶಿವಗಂಗೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಬನಶಂಕರಿ ಮೂಲದ ಮಧು ಎಂಬಾತನನ್ನು ಬಂಧಿಸಿದ್ದು, ಬಂಧಿತನಿಂದ ಪೊಲೀಸರು ಸುಮಾರು 1 ಕೆಜಿಗೂ ಅಧಿಕ ಗಾಂಜಾ ವಶಕ್ಕೆ ಪಡೆದಿದ್ದಾರೆ. ವಯಸ್ಕರು ಮತ್ತು ಗಾಂಜಾ ಚಟುವಟಿಕೆಯನ್ನು ಗಮನಿಸಿ ಆರೋಪಿಯನ್ನ ಗ್ರಾಮಸ್ಥರ ನೆರವಿನಿಂದ ಪೊಲೀಸರು ಬಂಧಿಸಿದ್ದಾರೆ.

ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.