ಗಾಜಿಯಾಬಾದ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ತಿರುವು – ಮಹಿಳೆ ಹೆಣೆದ ಕಟ್ಟುಕಥೆ…

50
firstsuddi

ನವದೆಹಲಿ : ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಇದೆಲ್ಲವೂ ಮಹಿಳೆ ಹೆಣೆದ ಕಟ್ಟುಕಥೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಜಿಯಾಬಾದ್ ನಲ್ಲಿ ದೆಹಲಿ ಮೂಲದ 38 ವರ್ಷದ ಮಹಿಳೆ ಮೇಲೆ ಐವರು ದುಷ್ಕರ್ಮಿಗಳು ಎರಡು ದಿನ ಸಾಮೂಹಿಕ ಅತ್ಯಾಚಾರ ಮಾಡಿದ್ದಲ್ಲದೇ ಕ್ರೂರವಾಗಿ ಚಿತ್ರಹಿಂಸೆ ನೀಡಲಾಗಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು, ಸಂತ್ರಸ್ತ ಮಹಿಳೆ ಸುಳ್ಳು ಆರೋಪ ಮಾಡಿರುವ ಸತ್ಯ ಬಯಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಮೀರತ್ ನ ಐಜಿ ಪ್ರವೀಣ್ ಕುಮಾರ್, ಮಹಿಳೆ ಆಸ್ತಿ ವಿವಾದದಲ್ಲಿ ಆರೋಪಿಯನ್ನು ಸಿಲುಕಿಸಲು ಆಜಾದ್ ಎಂಬಾತನೊಂದಿಗೆ ಸೇರಿಕೊಂಡು ಸುಳ್ಳು ಆರೋಪ ಹೊರಿಸಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಆರೋಪಿ ಮತ್ತು ಮಹಿಳೆ ನಡುವೆ ಆಸ್ತಿ ವಿವಾದ ಇತ್ತು. ಹಾಗಾಗಿ ಆಜಾದ್ ಜೊತೆಗೂಡಿ ಮಹಿಳೆ ಈ ಸಂಚು ರೂಪಿಸಿದ್ದರು. ಆಜಾದ್ ಜೊತೆಗೆ ಆತನ ಸಹವರ್ತಿಗಳಾದ ಗೌರವ್ ಮತ್ತು ಅಫ್ಜಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.