ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ- ಅಭಿಮಾನಿಗಳಲ್ಲಿ ನಟ ದರ್ಶನ್ ಮನವಿ…

487
firstsuddi

ಬೆಂಗಳೂರು : ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ ಎಂದು ನಟ ಚಾಲೆಂಜಿಂಗ್ ದರ್ಶನ್ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ ದರ್ಶನ್ ಅವರ ಪುತ್ರ ವಿನೀಶ್ ಹುಟ್ಟು ಹಬ್ಬದ ಸಂದರ್ಭದಲ್ಲಿ ದರ್ಶನ್ ಅವರ ಅಭಿಮಾನಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಹೀಗಾಗಿ ಕಳೆದ ವರ್ಷ ನಡೆದ ಘಟನೆಯನ್ನು ನೆನೆದು ದರ್ಶನ್ ಅವರು ತಮ್ಮ ಟ್ವಿಟರ್ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. “ ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ. ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ – ನಿಮ್ಮ ದಾಸ ದರ್ಶನ್ ಎಂದು ಬರೆದುಕೊಂಡಿದ್ದಾರೆ.