ಗಾಯದ ಮೇಲೆ ಬರೆ – ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ…

72
firstsuddi

ನವದೆಹಲಿ : ತೈಲ ಕಂಪನಿಗಳು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆಗಸ್ಟ್ 18 ರಂದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂಪಾಯಿ ಏರಿಕೆ ಮಾಡಲಾಗಿತ್ತು. ಇದೀಗ ಇಂದು ಮತ್ತೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು  25 ರೂಪಾಯಿ ಏರಿಕೆ ಮಾಡಲಾಗಿದ್ದು, ಕಳೆದ 15 ದಿನದ ಅಂತರದಲ್ಲಿ 2ನೇ ಭಾರಿಗೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ.

ದೆಹಲಿಯಲ್ಲಿ 884.5 ರೂಪಾಯಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ಏರಿಕೆಯಾದರೆ, ಕೋಲ್ಕತ್ತಾದಲ್ಲಿ 911 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 884.5 ರೂಪಾಯಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ. ಚೆನ್ನೈನಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 900.5 ರೂಪಾಯಿಗೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 887.5 ರೂಪಾಯಿಗೆ ಏರಿಕೆಯಾಗಿದೆ.

ಇನ್ನು ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯೂ 75 ರೂ. ಹೆಚ್ಚಳವಾಗಿದ್ದು ದೆಹಲಿಯಲ್ಲಿ ಸಿಲಿಂಡರ್ ಬೆಲೆ 1,693 ರೂ.ಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ 1760.50 ರೂ.ಗೆ ಏರಿಕೆಯಾಗಿದೆ.