ಗಾಳಿಯಲ್ಲಿ ಗುಂಡು ಹಾರಿಸಿ ಕಾಂಗ್ರೆಸ್ ಮುಖಂಡನ ಬರ್ತ್‍ಡೇ ಪಾರ್ಟಿ..!

129
Firstsuddi

ಧಾರವಾಡ : ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ತಾ.ಪಂ ಮಾಜಿ ಸದಸ್ಯ ಅಣ್ಣಪ್ಪಗೌಡ ಚಿನಗುಡಿ ಅವರ ಬರ್ತಡೇ ಪಾರ್ಟಿಯನ್ನು ಶಿವಳ್ಳಿ ಗ್ರಾಮದ ಹೊರವಲಯದಲ್ಲಿರುವ ತೋಟದ ಮನೆಯಲ್ಲಿ ಏರ್ಪಡಿಸಲಾಗಿತ್ತು. ಪಾರ್ಟಿಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಆಯಟ್ಟಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶುಭ ಕೋರಿದ್ದಾರೆ. ಶುಭಕೋರಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.