ದಾವಣಗೆರೆ: ಸಶಸ್ತ್ರ ಮೀಸಲು ಪಡೆಯ ಕಾನ್ಸ್ಸ್ಟೇಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಮಹಾನಗರ ಪಾಲಿಕೆಯ ಸ್ಟ್ರಾಂಗ್ ಬಳಿ ನಡೆದಿದೆ.
ಜಯನಗರ ಜಿಲ್ಲೆಯ ಹರಪನಹಳ್ಳಿ ನಿವಾಸಿ ಗುರುಮೂರ್ತಿ (34) ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ಸ್ಟೇಬಲ್. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗುರುಮೂರ್ತಿ ಅವರನ್ನು ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕಾನ್ಸ್ಸ್ಟೇಬಲ್ ಗುರುಮೂರ್ತಿ ಅವರು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಗಾರ್ಡ್ ಡ್ಯೂಟಿ ಮಾಡುತ್ತಿದ್ದರು. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










