ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು…

54
firstsuddi

ಗದಗ : ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.

ಗದಗದಲ್ಲಿ ಡಿಎಆರ್ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಕೆ.ಎಸ್.ಕೊಪ್ಪದ ಕರ್ತವ್ಯಯಲ್ಲಿರುವಾಗಲೇ ಭದ್ರತೆಗೆ ನೀಡಲಾಗಿದ್ದ 303 ರೈಫಲ್ ನಿಂದ ಕುತ್ತಿಗೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೇದೆ ಕೊಪ್ಪದ ಅವರಿಗೆ ಮದುವೆಯಾಗಿದ್ದು, ವಿಚ್ಛೇದನ ಸಂಬಂಧವಾಗಿ ಕೋರ್ಟ್ ನಲ್ಲಿ ವಿಚಾರಣೆ ನಡೆದಿತ್ತು. ಇದರಿಂದ ಬೇಸತ್ತು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆದರೆ ಮೃತ ಪೇದೆ ತಂದೆ, ಕಿರಣ್ ಅವರು ಇತ್ತೀಚಿಗೆ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಿದ್ದಾರೆ.

ಸ್ಥಳಕ್ಕೆ ಎಸ್.ಪಿ, ಡಿವೈಎಸ್ಪಿ, ಸಿಪಿಐ ಹಾಗೂ ಪೊಲೀಸ್ ಅಧಿಕಾರಿಗಳು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.