ಗುಜರಾತ್‍ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ, ಹಿಮಾಚಲ ಪ್ರದೇಶದಲ್ಲಿ ಕೈ-ಕಮಲ ಪೈಪೋಟಿ…

54
firstsuddi

ಅಹಮದಾಬಾದ್ : ಭಾರೀ ನಿರೀಕ್ಷೆ ಹುಟ್ಟಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು, ಆರಂಭಿಕ ಟ್ರೆಂಡ್ ಗಳ ಅನ್ವಯ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ, ಹಿಮಾಚಲ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದೆ.

ಬೆಳಗ್ಗೆ 8:20ರ ಟ್ರೆಂಡ್ ಪ್ರಕಾರ ಮೋದಿ, ಅಮಿತ್ ಶಾ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 93, ಕಾಂಗ್ರೆಸ್ 14, ಆಪ್ 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಗುಜರಾತ್ ನಲ್ಲಿ ಒಟ್ಟು 182 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತ ಸಾಧಿಸಲು ಬೇಕಾದ ಬಹುಮತದ ಸಂಖ್ಯೆ 92 ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಬೆಳಗ್ಗೆ 8:30ರ ಟ್ರೆಂಡ್ ಪ್ರಕಾರ ಬಿಜೆಪಿ 23, ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಬಿರುಸಿನ ಸ್ಪರ್ಧೆ ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಈ ಸಮೀಕ್ಷೆಯಂತೆ ಎರಡು ಪಕ್ಷಗಳ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿದ್ದು, ಸರಳ ಬಹುಮತಕ್ಕೆ 35 ಸ್ಥಾನಗಳ ಅಗತ್ಯವಿದೆ.