ಗುಜರಾತ್ ಚುನಾವಣೆಯಲ್ಲಿ ಹೀನಾಯ ಸೋಲು – ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ರಾಜೀನಾಮೆ…

61
firstsuddi

ಅಹಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಬಳಿಕ ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಇದುವರೆಗೂ ಕೇವಲ 16 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಬೆಳಗ್ಗೆ ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ ಪರವಾಗಿ ಆಶ್ಚರ್ಯಕರ ಫಲಿತಾಂಶಗಳು ಬರಲಿವೆ ಎಂದು ರಘು ಶರ್ಮಾ ಹೇಳಿದ್ದು, ಆಶಾಭಾವನೆ ವ್ಯಕ್ತಪಡಿಸಿದ್ದರು. ಆದರೆ ಮಧ್ಯಾಹ್ನವಾದಂತೆ ಕಾಂಗ್ರೆಸ್ ಕೇವಲ ಕೇವಲ 16 ಸ್ಥಾನಗಳಿಗೆ ಸೀಮಿತವಾಗಿದ್ದು, 182 ಸ್ಥಾನಬಲದ ಗುಜರಾತ್ ವಿಧಾನಸಭೆಯಲ್ಲಿ ಹೀನಾಯ ಸ್ಥಿತಿಗೆ ಬಂದಿದೆ. ಬಿಜೆಪಿ 158 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೇರುತ್ತಿದೆ.

ಸದ್ಯ ಗುಜರಾತ್ ಎಐಸಿಸಿ ಉಸ್ತುವಾರಿ ಸ್ಥಾನಕ್ಕೆ ರಘು ಶರ್ಮಾ ರಾಜೀನಾಮೆ ನೀಡಿದ್ದು, ಸೋಲಿನ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಶರ್ಮಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಕೈಬರಹದ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.