ಗುಜರಾತ್ ಚುನಾವಣೆ : ಎಎಪಿ ಸಿಎಂ ಅಭ್ಯರ್ಥಿ ಘೋಷಣೆ…

69
firstsuddi

ಅಹಮದಾಬಾದ್ : ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಜಿ ಪತ್ರಕರ್ತ ಮತ್ತು ಟಿವಿ ನಿರೂಪಕ ಇಸುದನ್ ಗಧ್ವಿ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದರು.

ಇಸುದನ್ ಗಧ್ವಿ ಅವರು, ಗುಜರಾತ್ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಕುರಿತು ಎಎಪಿ ನಡೆಸಿದ ಸಮೀಕ್ಷೆಯಲ್ಲಿ ಶೇ.73 ರಷ್ಟು ಮತಗಳನ್ನು ಗಳಿಸಿದ್ದಾರೆ. ಇಸುದನ್ ಗಧ್ವಿ ಕಳೆದ ವರ್ಷ ಜೂನ್ ನಲ್ಲಿ ಎಎಪಿ ಸೇರಿದ್ದರು. ಸದ್ಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್​ 8ರಂದು ಫಲಿತಾಂಶ ಪ್ರಕಟವಾಗಲಿದೆ.