ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಯಾವುದೇ ಪ್ರಭಾವ ಬೀರಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ.

59
firstsuddi

ಮೈಸೂರು : ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಬಗ್ಗೆ ನಮಗೆ ಮೊದಲೇ ನಿರೀಕ್ಷೆಯಿತ್ತು. ಏಕೆಂದರೆ ಆಪ್ ನಮ್ಮ ವೋಟ್ ಗಳನ್ನು ತಿನ್ನುತ್ತಿದೆ. ಆಪ್ ಪಡೆದಿರುವ ಮತಗಳೆಲ್ಲವೂ ಕಾಂಗ್ರೆಸ್ ಗೆ ಸೇರಿದ್ದು. ಆದರೆ ಹಿಮಾಚಲ ಪ್ರದೇಶದಲ್ಲಿ ಹಾಗಾಗುತ್ತಿಲ್ಲ. ಅಲ್ಲಿ ನಾವೇ ಮುಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನ ಓಟ್ ಅನ್ನು ವಿಭಜನೆ ಮಾಡುವ ಸಲುವಾಗಿ ಬಿಜೆಪಿ ಆಪ್ ಗೆ ಹಣ ನೀಡಿದೆ. ಇದರಿಂದ ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದು, ಕಾಂಗ್ರೆಸ್ ಗೆ ಹಿನ್ನಡೆ ಆಗಿದೆ ಎಂದರು.

ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆ ಕರ್ನಾಟಕದ ಮೇಲೂ ಪ್ರಭಾವ ಬೀರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯಕ್ಕೆ ಪ್ರಭಾವ ಬೀಳಲು ಸಾಧ್ಯವಿಲ್ಲ. ಅದರಂತೆ ಗುಜರಾತ್ ನ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ. ಆಯಾಯ ರಾಜ್ಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚುನಾವಣೆಯ ಫಲಿತಾಂಶಗಳು ಹೊರಬೀಳುತ್ತವೆ. ಇಲ್ಲಿ ಬಿಜೆಪಿ ಭ್ರಷ್ಟ ಸರ್ಕಾರ ನಡೆಸುತ್ತಿದ್ದರೆ, ಕಾಂಗ್ರೆಸ್ ತುಂಬಾ ಗಟ್ಟಿಯಾಗಿ ನಿಂತಿದೆ. ನಾವು ಕರ್ನಾಟಕದಲ್ಲಿ ಸುಮ್ಮನೆ ಇದ್ದರೂ ಗೆಲ್ಲುವ ತಾಕತ್ತು ನಮ್ಮಲ್ಲಿದೆ ಎಂದು ಹೇಳಿದರು.