ಗುಡ್‍ನೈಟ್ ಲಿಕ್ಷಿಡ್ ಕುಡಿದು ಮಗು ಸಾವು!

55
firstsuddi

ಕಾರವಾರ : ಗುಡ್ ನೈಟ್ ಕಾಯಿಲ್ ನ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾವೂರಿನಲ್ಲಿ ನಡೆದಿದೆ. ಆರವ್ ಮಹೇಶ್ ನಾಯ್ಕ (2) ಸಾವನ್ನಪ್ಪಿದ ಮಗು.

ಮನೆಯ ನೆಲದ ಮೇಲೆ ಇಟ್ಟಿದ್ದ ಗುಡ್ ನೈಟ್ ಲಿಕ್ವಿಡ್ ಕುಡಿದ ಮಗು ಅಸ್ವಸ್ಥಗೊಂಡಿತ್ತು. ತಕ್ಷಣ ಪೋಷಕರು ಮಗುವನ್ನು ಹೊನ್ನಾವರ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.