ಗೃಹ ಸಚಿವರ ಬೆಂಗಾವಲು ವಾಹನ ಡಿಕ್ಕಿ : ಬೈಕ್ ಸವಾರ ಸಾವು…

78
firstsuddi

ಹಾಸನ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.

ಚಿಕ್ಕಗಂಡಸಿ ಗ್ರಾಮದ ರಮೇಶ್ (45) ಮೃತ ದುರ್ದೈವಿ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಪೆಟ್ರೋಲ್ ಬಂಕ್ ನಿಂದ ಬೈಕ್ ಸವಾರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಅಪಘಾತವಾದರೂ ವಾಹನ ನಿಲ್ಲಿಸದೆ ಗೃಹಸಚಿವರು ತೆರಳಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಸ್ಥಳಕ್ಕೆ ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಮೃತದೇಹವನ್ನ ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.