ಗೊರಗುಂಟೆ ಪಾಳ್ಯ ಫ್ಲೈ ಓವರ್ ಸಮಸ್ಯೆ ಸರಿಪಡಿಸುವ ಬಗ್ಗೆ ಕೇಂದ್ರ ಅಧಿಕಾರಿಗಳ ಜೊತೆ ಚರ್ಚೆ : ಬೊಮ್ಮಾಯಿ.

88
firstsuddi

ಬೆಂಗಳೂರು: ಗೊರಗುಂಟೆ ಪಾಳ್ಯ ಫ್ಲೈ ಓವರ್ ಸಮಸ್ಯೆ ಸರಿಪಡಿಸುವ ಬಗ್ಗೆ ಕೇಂದ್ರ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಎರಡು ದಿನಗಳ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಮಂಥನ ಸಭೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ನಿತಿನ್ ಗಡ್ಕರಿ ಜೊತೆ ನಿನ್ನೆಯಷ್ಟೇ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದರು. ಇಂದು ಮತ್ತೊಮ್ಮೆ ಗಡ್ಕರಿಯವನ್ನು ಭೇಟಿಯಾಗಿ ಹಲವು ಯೋಜನೆಗಳ ಸಂಬಂಧ ಚರ್ಚೆ ನಡೆಸಿದ್ದಾರೆ.

ಗಡ್ಕರಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇವತ್ತು ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆ ಚರ್ಚೆ ಆಗಿದೆ. ಲೋಕೋಪಯೋಗಿ, ಬಿಬಿಎಂಪಿ, ಹಣಕಾಸು ಇಲಾಖೆ ಅಧಿಕಾರಿಗಳು ಚರ್ಚೆ ಮಾಡಿದ್ದೇವೆ. ಇಡೀ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೆಳ ಅಭಿವೃದ್ದಿ ಬಗ್ಗೆ ಚರ್ಚೆ ಆಗಿದೆ. ಇದರ ಜೊತೆ ಪ್ರಮುಖವಾಗಿ ಗೊರಗುಂಟೆ ಪಾಳ್ಯ ಫ್ಲೈ ಓವರ್ ಸಮಸ್ಯೆ ಸರಿಪಡಿಸಲು ಚರ್ಚೆ ಆಗಿದೆ. ಹೈವೇ ಕೇಬಲ್ ಕೆಲಸ ಯಾವ ಏಜೆನ್ಸಿ ಮಾಡಬೇಕು ಅಂತ ಚರ್ಚೆ ಆಗಿದೆ. ಕೇಂದ್ರದ ಅಧಿಕಾರಿಗಳೇ ಇದನ್ನು ಮಾಡುತ್ತೇವೆ ಅಂತ ಹೇಳಿದ್ದಾರೆ. ದುರಸ್ತಿ ಕಾರ್ಯದ ಜವಾಬ್ದಾರಿ ವಹಿಸಿಕೊಳ್ಳಲು ಒಪ್ಪಿದ್ದಾರೆ ಎಂದು ತಿಳಿಸಿದರು.

ನ್ಯಾಷನಲ್ ಹೈವೇಯಲ್ಲಿ ಕೆಲವೆಡೆ ಸ್ಕೈವಾಕ್, ಬ್ರಿಡ್ಜ್, ಅಂಡರ್ ಪಾಸ್ ಮಾಡೋದಿದೆ. ಅದರ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇವೆ. ಇವತ್ತು ಚರ್ಚೆ ಮಾಡಿರುವ ಎಲ್ಲಾ ವಿಚಾರಗಳು ತುರ್ತಾಗಿ ನಡೆಯುತ್ತವೆ. ಪ್ಲಾನಿಂಗ್ಸ್ ರೆಡಿ ಮಾಡಿಕೊಂಡು ಬನ್ನಿ, ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಇದೇ ವರ್ಷ ಕೆಲಸಗಳು ಪ್ರಾರಂಭವಾಗಬೇಕು ಎನ್ನುವುದೇ ನಮ್ಮ ಉದ್ದೇಶ. ಆ ನಿಟ್ಟಿನಲ್ಲಿ ಕೆಲಸಗಳು ನಡೆಯಲಿವೆ. ನ್ಯಾಷನಲ್ ಹೈವೇ ಕಡೆಯಿಂದ ಹಣ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ ಎಂದರು.

ಹೊಸ ಹೆದ್ದಾರಿ ನಿರ್ಮಾಣ ವಿಚಾರ ಸಂಬಂಧ ಶಿರಾಡಿ ಘಾಟ್ ರಸ್ತೆ ಬೇಗ ಮುಗಿಸುತ್ತೇವೆ ಅಂತ ಹೇಳಿದ್ದಾರೆ. ಹೊಸ ಹೆದ್ದಾರಿ ಬಗ್ಗೆ ಕೇಂದ್ರ ರಸ್ತೆ ನಿಧಿ ಅಡಿಯಲ್ಲಿ ಮಾಡುತ್ತಿದ್ದೇವೆ ಅಂತ ಹೇಳಿದ್ದಾರೆ. ಆದಷ್ಟು ಬೇಗ ಈ ಕೆಲಸ ಆಗಲಿದೆ ಎಂದು ಹೇಳಿದರು.

ನಾಳೆ ನಡೆಯಲಿರುವ ಜನೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ತಯಾರಿ ನಡೆದಿದೆ. ಜೆಪಿ ನಡ್ಡಾವರಿಗೆ ಬೇರೆ ಕಾರ್ಯಕ್ರಮವಿದೆ. ಇಂದು ಸಂಜೆ ಅವರು ಬರೋದರ ಬಗ್ಗೆ ನಿಗದಿ ಆಗಲಿದೆ. ನಾಳೆಯ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬರಲಿದ್ದಾರೆ ಎಂದರು.