ಗೋವಾ ಚುನಾವಣೆಗೆ ಸಿಎಂ ಅಭ್ಯರ್ಥಿ ಘೋಷಿಸಿದ ಕೇಜ್ರಿವಾಲ್.

72
firstsuddi

ಪಣಜಿ : ಮುಂಬರುವ ಗೋವಾ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಅಮಿತ್ ಪಾಲೇಕರ್ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಅರವಿಂದ್ ಕೇಜ್ರಿವಾಲ್, ಅಮಿತ್ ಪಾಲೇಕರ್ ಅವರು ಗೋವಾ ವಿಧಾನಸಭಾ ಚುನಾವಣೆಗೆ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ. ಅಮಿತ್ ಪಾಲೇಕರ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಭಂಡಾರಿ ಸಮುದಾಯದವರಾಗಿದ್ದಾರೆ. ಗೋವಾದ ಒಟ್ಟು 40 ವಿಧಾನಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ.