ಗೌರಿ ಗಣೇಶೋತ್ಸವ ಕಾರ್ಯಕ್ರಮ ನಡೆಸಿದ ಸಮಿತಿಗೆ ಪೊಲೀಸ್ ಇಲಾಖೆಯಿಂದ ಗೌರವ.

26

ಕೊಟ್ಟಿಗೆಹಾರ: ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ ಶ್ರೀ ವಿದ್ಯಾ ಗಣಪತಿ ಪ್ರತಿಷ್ಠಾಪನೆ ಹಾಗೂ ಶಾರದಾ ಪೂಜೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಶಾಂತಿಯುತವಾಗಿ ನಡೆಸಿದ ವಿದ್ಯಾಗಣಪತಿ ಸೇವಾ ಸಮಿತಿ, ಕೊಟ್ಟಿಗೆಹಾರ ಹಾಗೂ ಬಣಕಲ್ ನಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ ನಡೆಸಿದ ಅಂಗವಾಗಿ ಸಮಿತಿಯ ಮುಖಂಡರಾದ ಜಿ.ವೇಣುಗೋಪಾಲ್ ಪೈ, ಸಂಜಯ್ ಗೌಡ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಕ್ರಂ ಅಮಟೆ ಅವರು ಕಚೇರಿಯಲ್ಲಿ ಫಲಪುಷ್ಪ ನೀಡಿ ಗೌರವಿಸಿದರು.ಬಣಕಲ್ ನಲ್ಲಿ ಗೌರಿಗಣೇಶ ಹಾಗೂ ಶಾರದಾ ಪೂಜೆಯನ್ನು ಶಾಂತಿಯುತವಾಗಿ ನಡೆಸಿದ ಹಿನ್ನಲೆಯಲ್ಲಿ ಸಾವರ್ಕರ್ ಪ್ರತಿಷ್ಠಾನ ಹಾಗೂ ಗಣಪತಿ ಸೇವಾ ಸಮಿತಿಯ ಪರವಾಗಿ ಮುಖಂಡ ವಿನಯ್ ಎಸ್.ಶೆಟ್ಟಿ ಪೊಲೀಸ್ ಇಲಾಖೆಯಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮೇಗೌಡ, ಬಣಕಲ್ ಠಾಣೆ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ, ಮತ್ತಿತರ ಪೊಲೀಸ್ ಅಧಿಕಾರಿಗಳು ಇದ್ದರು.