ಗ್ಯಾಂಗ್ ರೇಪ್ ಪ್ರಕರಣ : ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದ ಕಾಮುಕರು…

40
firstsuddi

ಮೈಸೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಕಾಮುಕರು ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದು ತಮ್ಮ ವಿರುದ್ಧ ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದಾರಂತೆ. ಅಲ್ಲದೇ ಪೊಲೀಸರಿಗೆ ದೂರು ಕೊಟ್ಟರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ನಂತರ ವಿದ್ಯಾರ್ಥಿನಿಯ ಜೊತೆ ಇದ್ದ ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಕುಳಿತಿದ್ದರು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿ ಬಳಿಕ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.