ನವದೆಹಲಿ : ಪೆಟ್ರೋಲಿಯಂ ಕಂಪನಿಗಳು ವಾಣಿಜ್ಯ ಬಳಕೆಯ ಸಿಲಿಂಡರ್ ದರ ಎರಿಕೆ ಮಾಡಿದ್ದು, ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.
100 ರೂ. ಏರಿಕೆಯೊಂದಿಗೆ ಸದ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ 2,101 ರೂ.ಗೆ ಲಭ್ಯವಾಗುತ್ತಿದೆ. ಕೋಲ್ಕತ್ತದಲ್ಲಿ 2177 ರೂ., ಮುಂಬೈನಲ್ಲಿ 2051 ರೂ., ಚೆನ್ನೈನಲ್ಲಿ 2234 ರೂ.ರಷ್ಟಾಗಿದೆ.
ನವೆಂಬರ್ 1 ರಂದು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ದರವನ್ನು 266 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ಆದರೆ ಗೃಹ ಬಳಕೆ ಎಲ್‌ಪಿಜಿ ದರದಲ್ಲಿ ಯಾವುದೇ ಏರಿಕೆ ಆಗಿಲ್ಲ.










