ನವದೆಹಲಿ : ತೈಲ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಗೆ ತಲಾ 80 ಪೈಸೆ ಹೆಚ್ಚಿಸಲಾಗಿದೆ. ಕಳೆದ 16 ದಿನಗಳಲ್ಲಿ ಲೀಟರ್ ಗೆ 10 ರೂ. ಏರಿಕೆಯಾಗಿದೆ.
ದೆಹಲಿಯಲ್ಲಿ ಸದ್ಯ ಪೆಟ್ರೋಲ್ ಬೆಲೆ ಲೀಟರ್ ಗೆ 105.41 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಲೀಟರ್ ಗೆ 96.67 ರೂ.ಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ 120.51 ರೂ., ಡೀಸೆಲ್ 104.77 ರೂ., ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 115.12 ರೂ., ಡೀಸೆಲ್ 99.83 ರೂ. ಚೆನ್ನೈನಲ್ಲಿ ಪೆಟ್ರೋಲ್ 110.86 ರೂ., ಡೀಸೆಲ್ 100.95 ರೂ.ಗೆ ಏರಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ 111.09 ರೂ., ಡೀಸೆಲ್ 94.79 ರೂ. ರೂಪಾಯಿ ಇದೆ.










