ಬೆಂಗಳೂರು : ಬಿಗ್ ಬಾಸ್ ಸೀಸನ್ 5ರ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಮದುವೆ ದಿನಾಂಕ ನಿಗದಿಯಾಗಿದೆ. ಇತ್ತೀಚೆಗಷ್ಠೇ ಸಂದರ್ಶನವೊಂದರಲ್ಲಿ ಭಾಗವಹಿಸಿ ಮಾತನಾಡಿದ ನಿವೇದಿತಾ ಗೌಡ ಅವರು ಸ್ವತಃ ತಾವೇ ತಮ್ಮ ಮದುವೆ ದಿನಾಂಕವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಫೆ. 25 ಹಾಗೂ 26ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಇವರ ಮದುವೆ ಮೈಸೂರಿನ ಕನ್ವೆನ್ಶನ್ ಹಾಲ್ನಲ್ಲಿ ನಡೆಯಲಿದೆ. ಹೀಗಾಗಿ ಎರಡು ಕುಟುಂಬಗಳು ಮದುವೆಗಾಗಿ ಅದ್ದೂರಿ ತಯಾರಿಯನ್ನು ನಡೆಸುತ್ತಿದ್ದಾರೆ. ಈ ನಡುವೆ ನಿವೇದಿತಾ ಗೌಡ ಅವರು ವೃತ್ತಿ ಜೀವನವನ್ನು ಆರಂಭಿಸಿದ್ದು, ನಮ್ಮಿಬ್ಬರ ಇಷ್ಟದಂತೆ ಮದುವೆ ತಯಾರಿ ನಡೆಯುತ್ತಿದೆ. ಇಬ್ಬರ ಮನೆಯವರು ಮದುವೆ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.










