ಚನ್ನಪಟ್ಟಣ ಉಪಚುನಾವಣೆಗೆ ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆ.

45

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿ ಯಾರಾಗಬಹುದು ಎಂಬ ಕುತೂಹಲ ಜನರಲ್ಲಿ ಮೂಡಿಸಿತ್ತು. ಜೆಡಿಎಸ್ ಮುಖಂಡರ ಸಭೆ ಬಳಿಕ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‍ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರ ಸಭೆ ಬಳಿಕ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಣೆ ಮಾಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮ-ಮಿತ್ರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ ಅವರು, ನಾಳೆ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುತ್ತಾರೆ. ಯಡಿಯೂರಪ್ಪನವರ ನಿವಾಸದಲ್ಲಿ ಚರ್ಚೆ ನಡೆಸಿ ಹೆಸರು ಘೋಷಣೆ ಮಾಡಲಿದ್ದಾರೆ. ಚನ್ನಪಟ್ಟಣದಲ್ಲಿ ನೆಲೆಯೂರಿ ಹೂಡಿ, ಎನ್‍ಡಿಎ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ ಎಂದು ದೇವೇಗೌಡರು ತಿಳಿಸಿದರು.
ಮಾಜಿ ಸಿಎಂ ಯಡಿಯೂರಪ್ಪನವರ ಮನೆಯಲ್ಲಿ ನಾಳೆ ಎನ್‍ಡಿಎ ಮುಖಂಡರ ಸಭೆಯ ಬಳಿಕ ನಿಖಿಲ್ ಕುಮಾರಸ್ವಾಮಿ ಹೆಸರು ಅಧಿಕೃತವಾಗಿ ಘೋಷಣೆಯಾಗಲಿದೆ. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಲ್ಲಿ ಹೆಸರು ಘೋಷಣೆ ಮಾಡುತ್ತೇವೆ ಎಂದು ಹೆಚ್‍ಡಿ ಕುಮಾರಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.