ಚನ್ನಪಟ್ಟಣ: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರ ಟಿಕೆಟ್ ಕಿತ್ತಾಟವನ್ನೇ ಅಸ್ತ್ರವನ್ನಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಬರುವ ಹಾಗೆ ಅವರ ಗಮನ ಸೇಳೆದಿದ್ದಾರೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ರಾಜಕೀಯ ಗುದ್ದಾಟಕ್ಕೆ ಸಜ್ಜಾಗಿದ್ದಾರೆ. ಚನ್ನಪಟ್ಟಣದಲ್ಲೇ ಇದ್ದ ಸಿಪಿ ಯೋಗೇಶ್ವರ್ ಅವರು ಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ನಡೆಸಿದರು. ಇವರ ಜೊತೆಗೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಅವರು ಕೂಡ ಅವರ ಜೊತೆ ಇದ್ದರು.
ಸಿ.ಪಿ.ಯೋಗೇಶ್ವರ್ ಅವರರು ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಾಮಪತ್ರ ಸಲ್ಲಿಸಿದರು ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್ ಅವರು ಬಿಜೆಪಿ ನನಗೆ ಟಿಕೆಟ್ ಕೊಡಲ್ಲ ಎಂಬುದು ಗೊತ್ತಿತ್ತು. ನಿನ್ನೆವರೆಗೂ ಕಾದಿದ್ದೆ ಎಂದರು. ಅಲ್ಲದೆ, ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ಒಂದೆರಡು ದಿನ ಕಾದಿದ್ದರೆ, ರಾಜಕೀಯವಾಗಿ ನನ್ನ ಮುಗಿಸುವ ಸಂಚು ಹೂಡಲಾಗಿತ್ತು ಎಂದು ಬಿಜೆಪಿಯನ್ನು ಆರೋಪಿಸಿದರು. ಸಿಪಿ.ಯೋಗೇಶ್ವರ್ ಕಾಂಗ್ರೇಸ್ ಪಕ್ಷಕ್ಕೆ ಬಂದಿದ್ದಕ್ಕೆ ಚನ್ನಪಟ್ಟಣ ಕಾಂಗ್ರೆಸ್‍ನಲ್ಲಿ ಅಸಮಾಧಾನ ಉಂಟಾಗಿದೆ ಎಂಬ ಮಾಧ್ಯಮದವರ ಪ್ರಶ್ನೇಗೆ ಉತ್ತರಿಸಿದ ಡಿಕೆ ಸುರೇಶ್, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು. ಚನ್ನಪಟ್ಟಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.










