ಮಂಗಳೂರು : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಿನ್ನೆ ರಾತ್ರಿ ಶಕ್ತಿನಗರದಲ್ಲಿ ನಡೆದಿದೆ.
ಮಹಿಳೆಯೊಬ್ಬರು ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಗಾಬರಿಗೊಂಡ ಮಹಿಳೆ ಕೂಡಲೇ ಕಾರಿನಿಂದ ಇಳಿದಿದ್ದು, ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಪಾಂಡೇಶ್ವರ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ.