ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್ ಸಾವು…

35
firstsuddi

ಮೈಸೂರು: ಚಲಿಸುತ್ತಿದ್ದ ಕೆಎಸ್​​ಆರ್​ಟಿಸಿ ಬಸ್​ನಿಂದ ಆಯತಪ್ಪಿ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ.

ಚಾಮರಾಜನಗರ ತಾಲೂಕಿನ ಹಳೇಪುರ ನಿವಾಸಿ ಮಹದೇವಸ್ವಾಮಿ (35) ಮೃತ ನಿರ್ವಾಹಕ. ನಿರ್ವಾಹಕ ಮಹದೇವಸ್ವಾಮಿ ಕೆಎಸ್​ಆರ್​ಟಿಸಿ ಬಸ್​ನ ಫುಟ್​ ಬೋರ್ಡ್​​ನಲ್ಲಿ ನಿಂತಿದ್ದರು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನಂಜನಗೂಡು ಡಿವೈಎಸ್​​ಪಿ ರಘು, ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.