ಚಲಿಸುತ್ತಿದ್ದ ಬಸ್ ಕೆಳಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ…

53
firstsuddi

ವಿಜಯಪುರ: ಚಲಿಸುತ್ತಿದ್ದ ಸರ್ಕಾರಿ ಬಸ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿ ನಡೆದಿದೆ.

ವಿಶ್ವನಾಥ ಶಂಕರಯ್ಯ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದಾಗಿದೆ.

ವಿಶ್ವನಾಥ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದವರು ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಸ್ಥರ ಮೊಬೈಲ್ ಸಂಖ್ಯೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.