ಚಿತ್ರದುರ್ಗ : ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ ಬಳಿ ನಡೆದಿದೆ. ಮೃತರನ್ನು ಬಸ್ ಚಾಲಕ ಪ್ರವೀಣ್(36), ಬೆಂಗಳೂರು ಮೂಲದ ವಿಜಯ ಕುಮಾರ್(37) ಎಂದು ಗುರುತಿಸಲಾಗಿದ್ದು, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಣಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










