ಚಿತ್ರದುರ್ಗ : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕ್ಯಾದಿಗ್ಗೆರೆ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಸಾಯಿ(19) ಹಾಗೂ ಸಂತೋಷ(40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತರು ಸೇರಿದಂತೆ ಕಾರಿನಲ್ಲಿ ಒಟ್ಟು 5 ಮಂದಿ ತಿರುಪತಿಯಿಂದ ಪುಣೆಗೆ ವಾಪಸ್ಸಾಗುತ್ತಿದ್ದ ವೇಳೆ ಕ್ಯಾದಿಗ್ಗೆರೆ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










