ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ; 24 ಮಂದಿ ಸಾವು…

176
firstsuddi

ಚಾಮರಾಜನಗರ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿ 16 ಮಂದಿ ಹಾಗೂ ಇಂದು ಬೆಳಗಿನ ಜಾವ 6ಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. 24 ಮಂದಿ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದು, ಆಸ್ಪತ್ರೆಯ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಆದರೆ, ವೈದ್ಯರು ಮಾತ್ರ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿಲ್ಲ, ಬೇರೆ ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ.