ಬೆಂಗಳೂರು : ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಎಸ್ ಅಧಿಕಾರಿ, ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ, ಘಟನೆಗೆ ಕಾರಣ ಪತ್ತೆ ಹಚ್ಚಿ ತನಿಖಾ ವರದಿಯನ್ನು 3 ದಿನದೊಳಗೆ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.











