ಚಾಮುಂಡಿಬೆಟ್ಟದ ಭೂ ವಿವಾದ ; ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ…

88
firstsuddi

ಮೈಸೂರು : ಚಾಮುಂಡಿಬೆಟ್ಟದ ತಪ್ಪಲಿನ ಭೂ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ಭೂಮಿ ಮಹಾರಾಜರ ಖಾಸಗಿ ಆಸ್ತಿಯೆಂದು ಹೈಕೋರ್ಟ್ ವಿಭಾಗೀಯ ಪೀಠ ಕಳೆದ ವರ್ಷ ತೀರ್ಪು ನೀಡಿತ್ತು. ಆದರೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಂದಿನ ಡಿಸಿ ರೋಹಿಣಿ ಸಿಂಧೂರಿ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದು ವಿಚಾರಣೆಗೆ ಯೋಗ್ಯವಲ್ಲವೆಂದು ಮೇಲ್ಮನವಿ ತಿರಸ್ಕರಿಸಿದೆ. ಈ ಮೂಲಕ ಕುರುಬಾರಹಳ್ಳಿ, ಆಲನಹಳ್ಳಿ, ಚೌಡಹಳ್ಳಿ ಈ ಮೂರು ಸರ್ವೆ ನಂಬರ್ ಗಳಿಗೆ ಸೇರಿದ 850 ಎಕರೆಯಷ್ಟು ಭೂಮಿಯ ಮಾಲೀಕತ್ವಕ್ಕೆ ಸಂಬಂಧಪಟ್ಟಂತೆ ಕಳೆದ ಎರಡು ದಶಕಗಳಿಂದ ಸರ್ಕಾರ ಮತ್ತು ಭೂ ಮಾಲೀಕರ ನಡುವೆ ನಡೆಯುತ್ತಿದ್ದ ಕಾನೂನು ಸಮರಕ್ಕೆ ತೆರೆ ಬಿದ್ದಿದ್ದು, ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜರ ಖಾಸಗಿ ಆಸ್ತಿ ಎಂಬುದು ಇದೀಗ ಅಧಿಕೃತವಾಗಿದೆ.