ಚಾರ್ಮಾಡಿ ಘಾಟ್‍ನಲ್ಲಿ ಬೆಂಕಿಗಾಹುತಿಯಾದ ಕಾರು

98

ಕೊಟ್ಟಿಗೆಹಾರ:ಚಾರ್ಮಾಡಿ ಘಾಟ್‍ನ ಮಲಯಮಾರುತ ಸಮೀಪ ಕಾರೊಂದು ಶಾರ್ಟ್ ಸಕ್ಯೂರ್ಟ್‍ನಿಂದ ಬೆಂಕಿಗಾಹುತಿಯಾದ ಘಟನೆ ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.
ಮಂಗಳೂರಿನಿಂದ ಜಾವಗಲ್‍ಗೆ ಸಾಗುತ್ತಿದ್ದ ಕಾರಿನಲ್ಲಿ ಮಲಯಮಾರುತ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ದೇರಳಕಟ್ಟೆ ಮೂಲದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಸ್ಥಳಕ್ಕೆ ಬಣಕಲ್ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.