ರಾಯಚೂರು : ಲಾಕ್‍ಡೌನ್ ಸಡಿಲಿಕೆ ಆಗುತ್ತಿದ್ದಂತೆ ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಣಿಕೇರಿ ಕ್ಯಾಂಪ್ ಬಳಿ ನಡೆದಿದೆ. ಮೃತರನ್ನು ಗೋಪಾಲ್(29) ಹಾಗೂ ಚಾಲಕ ಲಕ್ಷ್ಮಣ(33) ಎಂದು ಗುರುತಿಸಲಾಗಿದ್ದು, ಕಾರಿನಲ್ಲಿ ಒಟ್ಟು 5 ಮಂದಿ ಆರೋಗ್ಯ ಸಮಸ್ಯೆ ಹಿನ್ನೆಲೆ ಅನುಮತಿ ಪಡೆದು ಬೆಂಗಳೂರಿಗೆ ತೆರಳಿದ್ದವರು ವಾಪಸ್ ಬೆಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಳಗಾನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










