ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ-ಪೊಲೀಸ್ ಪೇದೆ ಸಾವು-ಐವರಿಗೆ ಗಾಯ…

249
firstsuddi

ಚಿತ್ರದುರ್ಗ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹನುಮಂತರಾಯ(35) ಮೃತ ಪೇದೆ ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಸಶಸ್ತ್ರ ಮೀಸಲು ಪಡೆಯ ಪೇದೆಯಾಗಿದ್ದ ಹನುಮಂತರಾಯ ಅವರು ಕಲಬುರಗಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಕಾರಿನ ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರು ಪಲ್ಟಿಯಾಗಿದ್ದು, ಪೇದೆ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೂ ಐವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಐಮಂಗಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.