ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ- ಮೂವರು ಸ್ಥಳದಲ್ಲೇ ಸಾವು…

168
firstsuddi

ಚಾಮರಾಜನಗರ : ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನೂರು ತಾಲ್ಲೂಕಿನ ಜೆ. ವಿಲೇಜ್ ಸಮೀಪ ನಡೆದಿದೆ. ನಾಗರಾಜು(60), ವರ್ಯ(60) ಹಾಗೂ ಚಕ್ಕಸಿದ್ದಮ್ಮ(55) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ವಾಹನದಲ್ಲಿ 25ಕ್ಕೂ ಹೆಚ್ಚು ಮಂದಿ ಕೊಳ್ಳೇಗಾಲದ ಮಧುವನಹಳ್ಳಿಯಲ್ಲಿ ತಮ್ಮ ಸಂಬಂಧಿಕರ ಮದುವೆಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಪಿ.ಜಿ. ಪಾಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಈ ಕುರಿತು ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.