ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ನಿಂದ ಕೆಳಗೆ ಬಿದ್ದ ಲಾರಿ- ಸ್ಥಳದಲ್ಲೇ ಕ್ಲೀನರ್ ಸಾವು…

152
firstsuddi

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪ್ಲೈಓವರ್ ನಿಂದ ಕೆಳಗೆ ಬಿದ್ದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಶವಂತಪುರ ಪ್ಲೈಓವರ್ ಬಳಿ ನಡೆದಿದೆ. ಪುಣೆಯಿಂದ ಬೆಂಗಳೂರಿಗೆ ಅಣುಬೆಯನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಗಾಡಿ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.