ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಬಸ್- 22 ಮಂದಿಗೆ ಗಂಭೀರ ಗಾಯ…

114
firstsuddi

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು 22 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೂವಿನಕಟ್ಟೆಯಲ್ಲಿ ನಡೆದಿದೆ. ಚೇಳೂರಿನಿಂದ ಮಂಚಲದೊರೆ ಕಡೆ ತೆರಳುತ್ತಿದ್ದ ಬಸ್ ರಸ್ತೆಯಲ್ಲಿ ಇಳಿಜಾರಿದ್ದ ಕಾರಣ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಪರಿಣಾಮ 22 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.