ಚಾಲಕನ ನಿಯಂತ್ರ ತಪ್ಪಿ ಖಾಸಗಿ ಬಸ್ ಪಲ್ಟಿ, 7ಮಂದಿ ಸಾವು…

248
firstsuddi

ತುಮಕೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 7ಮಂದಿ ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರದಲ್ಲಿ ನಡೆದಿದೆ. ಚಾಲಕ ಅತಿ ವೇಗವಾಗಿ ಬಸ್‍ನ್ನು ಚಾಲನೆ ಮಾಡಿದ ಪರಿಣಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, 7ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಕೊಟಗೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.