ಚಿಂಚೋಳಿಯಲ್ಲಿ ಕಳವಾಗಿದ್ದ ಸರ್ಕಾರಿ ಬಸ್ ತೆಲಂಗಾಣದಲ್ಲಿ ಪತ್ತೆ…

50
firstsuddi

ಕಲಬುರಗಿ: ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಕಳ್ಳತನವಾಗಿದ್ದ ಸಾರಿಗೆ ಬಸ್ ಪ್ರಕರಣ ಸುಖಾಂತ್ಯ ಕಂಡಿದೆ.

ಜಿಲ್ಲೆಯ ಚಿಂಚೋಳಿ ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಕೆಆರ್​ಟಿಸಿಗೆ ಸೇರಿದ್ದ ಬಸ್ಸನ್ನು ನಿನ್ನೆ ನಸುಕಿನ ಜಾವ 3.30ರ ಸಮಯದಲ್ಲಿ ಕಳ್ಳರು ಕದ್ದೊಯ್ದಿದ್ದರು. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಘಟನೆ ನಡೆದು ಹದಿಮೂರು ಗಂಟೆಯಲ್ಲಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಸ್ಸನ್ನು ಪತ್ತೆ ಹಚ್ಚಿದ್ದಾರೆ.

ಸಾರಿಗೆ ಇಲಾಖೆಯಲ್ಲಿ ಅಮಾನತು ಆದವರೇ ಈ ಕೃತ್ಯ ನಡೆಸಿರುವ ಶಂಕೆ ಸದ್ಯ ವ್ಯಕ್ತವಾಗುತ್ತಿದ್ದು, ಇದೀಗ ಬಸ್ ಕಳ್ಳತನ ಮಾಡಿದ ಖತರ್ನಾಕ್ ಕಳ್ಳರಿಗಾಗಿ ಚಿಂಚೋಳಿ ಪೊಲೀಸರು ಬಲೆ ಬೀಸಿದ್ದಾರೆ.