ಚಿಕ್ಕಮಗಳುರು : ಡಿ.16ರಿಂದ 27ರವರೆಗೆ ವಿವಿಧ ತಾಲ್ಲೂಕುಗಳಿಗೆ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಉಪಾಧೀಕ್ಷಕರ ಭೇಟಿ…

302
firstsuddi

ಚಿಕ್ಕಮಗಳೂರು : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಡಿ.16 ರಿಂದ 27ರವರೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಸಭೆ ನಡೆಸಿ ದೂರುಗಳನ್ನು ಸ್ವೀಕರಿಸಲಿದ್ದಾರೆ. ಡಿ.16ರಂದು ಬೆಳಿಗ್ಗೆ 11 ಗಂಟೆಯಿಂದ ಚಿಕ್ಕಮಗಳೂರಿನಲ್ಲಿ ಮಧ್ಯಾಹ್ನ 3 ಗಂಟೆಯಿಂದ 5ಗಂಟೆಯವರೆಗೂ ಮೂಡಿಗೆರೆಯಲ್ಲಿ, ಡಿ.18ರಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ತರೀಕೆರೆಯಲ್ಲಿ, ಮಧ್ಯಾಹ್ನ 3ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಜ್ಜಂಪುರದಲ್ಲಿ, ಡಿ.21ರಂದು ಬೆಳಿಗ್ಗೆ 11ಗಂಟೆಯಿಂದ ಸಂಜೆ 5ಗಂಟೆವರೆಗೂ ಕಡೂರು ಮತ್ತು ಬೀರೂರಿನಲ್ಲಿ, ಡಿ.27ರಂದು ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 1ಗಂಟೆವರೆಗೂ ಕೊಪ್ಪ, ಮಧ್ಯಾಹ್ನ 3ಗಂಟೆಯಿಂದ ಸಂಜೆ 5ಗಂಟೆವರೆಗೂ ನರಸಿಂಹಾರಾಜಪುರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಲಿದ್ದಾರೆ.