ಚಿಕ್ಕಮಗಳೂರು : ಸಚಿವನಾಗಿ ನನ್ನ ಜಿಲ್ಲೆಗೆ ಇಷ್ಟೊಂದು ಅನುದಾನ ತೆಗೆದುಕೊಂಡಿಲ್ಲ, ಆದರೆ ಸಿ.ಟಿ. ರವಿ ತಮ್ಮ ಜಿಲ್ಲೆಯ ಅಭಿವೃದ್ಧಿಗೆ 959 ಕೋಟಿ ಅನುದಾನ ತಂದಿದ್ದಾರೆ : ಗೋವಿಂದ ಕಾರಜೋಳ

430
firstsuddi

ಚಿಕ್ಕಮಗಳೂರು : ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದ ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ 90ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, ನಾನು ಸಮಾಜ ಕಲ್ಯಾಣ ಸಚಿವನಾಗಿ ನನ್ನ ಜಿಲ್ಲೆಗೆ ಇಷ್ಟೊಂದು ಹಣ ಅನುದಾನ ತೆಗೆದುಕೊಂಡಿಲ್ಲ. ಆದರೆ ಸಚಿವ ಸಿ.ಟಿ. ರವಿ ಅವರು ತಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ 959 ಕೋಟಿ ರೂ. ಹಣ ಅನುದಾನವನ್ನು ತಂದಿದ್ದಾರೆ. ನನಗೆ ಅವರನ್ನು ನೋಡಿ ಹೊಟ್ಟೆ ಕಿಚ್ಚು ಬಂದಿದೆ. ನಾನು ಇಂದು ಕಾರ್ಯಕ್ರಮಕ್ಕೆ ಬರುತ್ತಿರಲಿಲ್ಲ. ನನಗೆ ಸಾಕಷ್ಟು ಕೆಲಸಗಳು ಇದ್ದವು. ರೈಲ್ವೆ ಇಲಾಖೆ ಸಭೆಗೆ ಹೋಗಬೇಕಿತ್ತು. ಆದರೆ ಸಿ.ಟಿ. ರವಿ ಅವರು ಬೈದಿದ್ದನ್ನು ನೋಡಿ ಇಂದು ಕಾರ್ಯಕ್ರಮಕ್ಕೆ ಬಂದಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿ ಕೆಲಸಕ್ಕೆ ಸರ್ಕಾರದ ಸಂಪೂರ್ಣ ಸಹಮತ ಇರುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ, ಪ್ರಾಣೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಸೇರಿ ವಿವಿಧ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.